ಕಾರವಾರ:
ಕಾರು ಲಾರಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಓರ್ವ ಮಹಿಳೆ ಸೇರಿ ಮೂವರಿಗೆ ಗಂಬೀರ ಗಾಯವಾಗಿದೆ.
ಕಾರವಾರ ತಾಲೂಕಿನ ಮುದಗಾ ರಾಷ್ಟ್ರೀಯ ಮಹಾಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಕಾರಿನಲ್ಲಿ ಎರಡು ಕುಟುಂಬದ ಎಂಟು ಜನರು ಪ್ರಯಾಣಿಸುತ್ತಿದ್ದರು.
ಕಾರಿನ ಏರ್ಬ್ಯಾಗ್ ಒಪನ್ ಆಗಿದ್ದರಿಂದ ಕಾರಿನಲ್ಲಿದ್ದವರು ಜೀವಪಾಯದಿಂದ ಪಾರಾಗಿದ್ದಾರೆ.
ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದರಿಂದ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಕಿಲೋ ಮೀಟರ್ ದೂರದ ವರೆಗೂ ಹೆದ್ದಾರಿಯಲ್ಲಿ ವಾಹನಗಳು ನಿಂತಿವೆ. ಗೋವಾ ಮೂಲದ ಕಾರು ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ.
ಕಾರು ಕಾರವಾರ ದಿಂದ ಅಂಕೋಲಾ ಕಡೆಗೆ ತೆರಳುತ್ತಿತ್ತು, ಹಾಗು
ಟ್ಯಾಂಕರ್ ಅಂಕೋಲಾ ಮಾರ್ಗದಿಂದ ಕಾರವಾರ ಕಡೆಗ ತೆರಳುತ್ತಿತ್ತು.ಅಪೂರ್ಣ ರಸ್ತೆ ಕಾಮಗಾರಿಯಿಂದ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿಲು ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕಿರಿದಾದ ಹೆದ್ದಾರಿ ಡಿವೈಡರ್ ನಿಂದ ಪದೇ ಪದೇ ಅಪಘಾತ ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಐ ಆರ್ ಬಿ ಕಂಪನಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಹೆದ್ದಾರಿ ಗಸ್ತು ವಾಹನ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ಕ್ರಮ ಕೈಗೊಂಡರು. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಆಗಮಿಸಿದ್ದಾರೆ.