ಹುಬ್ಬಳ್ಳಿ ಪ್ರಕರಣದಲ್ಲಿ ಕಾಂಗ್ರೇಸ್ ರಾಷ್ಷ್ರದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ; ಸಂಸದ ಕಾಗೇರಿ
ಹುಬ್ಬಳ್ಳಿ ಪ್ರಕರಣದಲ್ಲಿ ಕಾಂಗ್ರೇಸ್ ರಾಷ್ಷ್ರದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ; ಸಂಸದ ಕಾಗೇರಿ.
Karwar: ಹುಬ್ಬಳ್ಳಿಯ ರಾಷ್ಟ್ರದ್ರೋಹದ ಪ್ರಕರಣ ಹಿಂಪಡೆಯುವುದರ ಮೂಲಕ ಅಪರಾಧಿ ರಕ್ಷಣೆಗೆ ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ಕಾಂಗ್ರೆಸ್ ನೀಡಿದೆ. ಪ್ರಕರಣವನ್ನು ಹಿಂಪಡೆದು ಕಾಂಗ್ರೆಸ್ ಸರ್ಕಾರ ದೊಡ್ಡ ಅಪರಾಧ ಮಾಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತಮ್ಮ ಕಚೇರಿಯಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ಸಂಸದ ಕಾಗೇರಿ, ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್‌ಗಳನ್ನು ಸರ್ಕಾರ ಹಿಂಪಡೆಯುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ರಾಷ್ಟ್ರದ್ರೋಹದ ಅಪರಾಧಿಗಳನ್ನ ರಕ್ಷಿಸುತ್ತಿದೆ.
ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ 157 ಅಪರಾಧಿಗಳು ವಿಧ್ವಂಸಕ ಕೃತ್ಯ ನಡೆಸಿದ್ದರು. ರಾಷ್ಟ್ರದ್ರೋಹದ ಪ್ರಕರಣ ಹಿಂಪಡೆಯುವುದರ ಮೂಲಕ ಅಪರಾಧಿ ರಕ್ಷಣೆಗೆ ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ಕಾಂಗ್ರೆಸ್ ನೀಡಿದೆ.
ಪ್ರಕರಣವನ್ನ ಹಿಂಪಡೆದು ಕಾಂಗ್ರೆಸ್ ಸರ್ಕಾರ ದೊಡ್ಡ ಅಪರಾಧ ಮಾಡಿದೆ. ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬಾರದು ಎಂದು ಕಾಂಗ್ರೆಸ್ ಓಲೈಕೆಯ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್‌ಗೆ ಹಿಂದೂಗಳ ಕುರಿತು ಮಾತನಾಡುವಾಗ ಜಾತಿಯೇ ಮುಖ್ಯವಾಗುತ್ತದೆ. ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದಲ್ಲಿ ಅನೇಕ ಜಾತಿಗಳಿವೆ, ಅಲ್ಲಿ ಯಾಕೆ ಜಾತಿ ಗಣತಿ ನಡೆಸುತ್ತಿಲ್ಲ. ಕಾಂಗ್ರೆಸ್‌ನ ಷಡ್ಯಂತ್ರಕ್ಕೆ ಅಲ್ಪಸಂಖ್ಯಾತರು ಬಲಿಯಾಗಬಾರದು. ರಾಜ್ಯದ ಕಾಂಗ್ರೆಸ್ ಬ್ರಿಟಿಷ್ ಮಾನಸಿಕತೆ ಬೆಳೆಸಿಕೊಂಡಿದೆ. ರಾಜ್ಯದಲ್ಲಿ ಸರ್ಕಾರವಿದೆ, ಆದರೆ ಆಡಳಿತ ಶೂನ್ಯವಾಗಿದೆ. ರಾಜಕೀಯ ದ್ವೇಷ, ಸೇಡಿನ ರಾಜಕಾರಣದಲ್ಲಿ ಕಾಂಗ್ರೆಸ್ ಮುಳುಗಿದೆ. ರಾಜ್ಯದ ಅಭಿವೃದ್ಧಿಗೆ ಹಣವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ನೀಡಲು ಹಣವಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಓಲೈಕೆ ರಾಜಕಾರಣ, ಭ್ರಷ್ಟಾಚಾರ ಸರ್ಕಾರೀಕರಣವಾಗಿದೆ. ಅಹಂಕಾರದ ನಡುವಳಿಕೆಯಿಂದ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದ್ದಾರೆ. ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತಾಕತ್ತಿದ್ದರೆ ತನಿಖೆ ಎದುರಿಸಲಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನುಡಿದಿದ್ದಾರೆ.