Karwar: ಮಾವಿನ ಮರ ಏರಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದ ಇಂದಿರಾ ಪಟಗಾರ ಎಂಬುವವರ ಮನೆ ಸಮೀಪದ ಮಾವಿನ ಮರದ ಮೇಲೆ ಕಾಳಿಂಗ ಸರ್ಪ ಕಾಣಿಸಿಕೊಂಡಿತು. ಕಾಳಿಂಗ ಸರ್ಪ ನೋಡಿ ಭಯಭೀತರಾಗಿದ್ದ ಇಂದಿರಾ ಹಾಗು ಕುಟುಂಬಸ್ಥರು ಅರಣ್ಯ ಇಲಾಖೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗು ಉರಗ ಪ್ರೇಮಿ ಅಶೋಶ ನಾಯ್ಕ ಇವರು ಬೃಹತ್ ಗಾತ್ರದ ಕಾಳಿಂಗ ಸರ್ಪ ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.