ಗಣಿ ಅಕ್ರಮ ತನಿಖೆ ನಡೆಸುತ್ತಿರುವ ಸಿಬಿಐ ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ಸಂಜೆ ಕಾರವಾರದ ಪಕ್ಷೇತರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದೆ.
ಶಾಸಕ ಸತೀಶ್ ಸೈಲ್ ಮಾಲೀಕತ್ವದ ಕಂಪನಿ ವಿರುದ್ಧ 13 ಸೆ. 2013ರಂದು ಸಿಬಿಐ ಪ್ರಥಮ ಮಾಹಿತಿ ವರದಿ ದಾಖಲಿಸಿತ್ತು. ಸುಪ್ರಿಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 2009ರ ಆರಂಭದಿಂದ ಮೇ. 2010ರ ನಡುವೆ ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಹಾಗೂ ಅದಿರು ಸಾಗಣೆ ಕುರಿತು ತನಿಖೆ ಆರಂಭಿಸಲಾಗಿತ್ತು. ಈ ಸಮಯದಲ್ಲೇ ಸಿಬಿಐ ದಾಖಲಿಸಿದ್ದ ಐದು ಪ್ರತ್ಯೇಕ ಎಫ್‌ಐಆರ್‌ಗಳ ಪೈಕಿ ಶಾಸಕ ಸತೀಶ್ ಸೈಲ್ ಮಾಲೀಕತ್ವ ಹೊಂದಿರುವ ‘ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ. ಲಿ.’ ಪ್ರಮುಖ ಸ್ಥಾನ ಪಡೆದುಕೊಂಡಿದ್ದು. ಆರ್‌ಸಿ 16 ‘ಎ’ ಹೆಸರಿನಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್, ‘ಎಂಟು ತಿಂಗಳ ಅವಧಿಯಲ್ಲಿ ಸೈಲ್ ಮಾಲೀಕತ್ವದ ಕಂಪನಿ ಸುಮಾರು 7.23 ಲಕ್ಷ ಟನ್ ಮೆಟ್ರಿಕ್ ಅದಿರನ್ನು ಬೇಲಿಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ’ ಎಂದು ತಿಳಿಸಿತ್ತು.
ಆರೋಪ ಏನು?:
2009ರಿಂದ 2010ರ ಮೇ ತಿಂಗಳವರೆಗೆ ಬೇಲಿಕೇರಿ ಬಂದರಿನ ಮೂಲಕ ಸುಮಾರು 88. 06 ಲಕ್ಷ ಮೆಟ್ರಿಕ್ ಟನ್ ಅದಿರು, 73 ರಫ್ತು ಕಂಪನಿಗಳ ಮೂಲಕ ವಿದೇಶಕ್ಕೆ ಹೋಗಿತ್ತು ಎಂಬುದನ್ನು ಸಿಇಸಿ ವರದಿಯಲ್ಲಿ ಪಟ್ಟಿ ಮಾಡಲಾಗಿತ್ತು. ಇಷ್ಟು ಪ್ರಮಾಣ ಅದಿರುವು ರಫ್ತಾಗಿದ್ದರೂ, ಕೇವಲ 38. 22 ಲಕ್ಷ ಮೆಟ್ರಿಕ್ ಟನ್‌ನಷ್ಟು ಅದಿರಿಗೆ ಮಾತ್ರವೇ ಅದಿರು ಕಳುಹಿಸಲು ಪರವಾನಗಿ (ಎಂಡಿಪಿ)ಯನ್ನು ಪಡೆಯಲಾಗಿತ್ತು. ಒಟ್ಟಾರೆ ಸುಮಾರು 50 ಲಕ್ಷ ಮೆಟ್ರಿಕ್‌ನಷ್ಟು ಅದಿರು ಅಕ್ರಮವಾಗಿ ವಿದೇಶಗಳಿಗೆ ಹೋಗಿತ್ತು ಎಂಬುದನ್ನು ತನಿಖೆ ವೇಳೆ ಕಂಡುಕೊಳ್ಳಲಾಗಿತ್ತು. ಹೀಗೆ ರಫ್ತಾಗಿರುವ ಅದಿರನಲ್ಲಿ 7. 23 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಕಳುಹಿಸಿರುವುದು ಸತೀಶ್ ಸೈಲ್ ಒಡೆತನದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ. ಲಿ. ಎಂಬುದು ಆರೋಪ. ಜುಂಜುನ್‌ಬೈಲ್ ಸ್ಟಾಕ್‌ಯಾರ್ಡ್ ಸೇರಿದಂತೆ ಇತರೆ ಅದಿರು ಸಾಗಣೆದಾರರ ಜತೆ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ನಿಕಟ ವ್ಯವಹಾರ ನಡೆಸಿತ್ತು ಎಂಬುದಕ್ಕೆ ಸಿಬಿಐ ತನಿಖಾ ತಂಡ ದಾಖಲೆಗಳನ್ನು ಕಲೆ ಹಾಕಿದೆ.
ಕಾಂಗ್ರೆಸ್ ನಂಟು !
ಪಕ್ಷೇತರ ಶಾಸಕ ಸತೀಶ್ ಸೈಲ್ ಹಿಂದೆ ಕಾಂಗ್ರೆಸ್‌ನಲ್ಲಿ ಇದ್ದವರು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಸಿಗಲಿಲ್ಲ ಎಂದು ಪಕ್ಷೇತರರಾಗಿ ಕಣಕ್ಕಿಳಿದು ಚುನಾಯಿತರಾಗಿದ್ದರು. ಪಕ್ಷ ತೊರೆದರೂ ಕಾಂಗ್ರೆಸ್‌ನ ಕೆಲ ಹಿರಿಯ ಮುಖಂಡರ ಜತೆ ಸತೀಶ್ ಉತ್ತಮ ಸಂಬಂಧ ಹೊಂದಿದ್ದರು. 2009 ರಿಂದ 2011ರ ನಡುವೆ ಬಳ್ಳಾರಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಅನೇಕರನ್ನು ತನ್ನೊಳಗೆ ಸೆಳೆದುಕೊಂಡಿತ್ತು. ‘‘ಈ ವೇಳೆಯಲ್ಲಿ ಕಾರವಾರದಲ್ಲಿ ಪ್ರಭಾವಿಯಾಗಿದ್ದ ಸತೀಶ್, ಅಕ್ರಮ ಗಣಿಗಾರಿಕೆ ಅದಿರು ಸಾಗಣೆ ಉದ್ಯಮಕ್ಕೆ ಇಳಿದರು.