Uncategorized

ವಿಶ್ವ ಮೀನುಗಾರಿಕೆ ದಿನ ಈ ಬಾರಿ ಜಿಲ್ಲೆಯಲ್ಲಿ ಆಗಲಿದೆ.

ವಿಶ್ವ ಮೀನುಗಾರಿಕೆ ದಿನ ಈ ಬಾರಿ ಜಿಲ್ಲೆಯಲ್ಲಿ ಆಗಲಿದೆ

ಭಟ್ಕಳ: ಕಳೆದ ಹತ್ತು ವರ್ಷದಿಂದ ವಿಶ್ವ ಮೀನುಗಾರಿಕಾ ದಿನಾಚರಣೆ ಆಚರಿಸುತ್ತಿದ್ದೇವೆ. ಆದರೆ ಬೆಂಗಳೂರಿಗೆ ಮಾತ್ರ ಈ ದಿನಾಚರಣೆ ಸೀಮಿತವಾಗಿತ್ತು. ಮೊದಲ ಬಾರಿಗೆ ಕಡಲತೀರದಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳು ವೈದ್ಯ ಹೇಳಿದರು.

ಈ ಸಂಭಂದ ಮಾದ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಶ್ವ ಮೀನುಗಾರಿಕೆ ದಿನಾಚರಣೆ ಕಾಟಾಚಾರಕ್ಕೆ ಮಾಡುತ್ತಿಲ್ಲ. ರಾಜ್ಯದ ಎಲ್ಲಾ ಮೀನುಗಾರರನ್ನು ಒಂದೆಡೆ ಸೇರಿಸಿ ಕಾರ್ಯಕ್ರಮ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 500 ವಿಧದ ಮೀನಿನ‌ ಬಗೆಯನ್ನು ಪ್ರದರ್ಶನ ಮಾಡಲಾಗುತ್ತಿದೆ. ಮೀನಿನ ಪರಿಚಯ ಎಲ್ಲರಿಗೂ ಮಾಡಲು ಪ್ರಯತ್ನಿಸಲಾಗುವುದು ಎಂದರು.

ಚಿಪ್ಪಿಕಲ್ಲು, ಮೀನುಗಳನ್ನು ಸುರಂಗದಲ್ಲಿ ನೋಡಿ ಸಾಗುವ ರೀತಿಯಲ್ಲಿ ವೇದಿಕೆ ಸಿದ್ದಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿಯೇ ಈ ವಿಶೇಷ ಕಾರ್ಯಕ್ರಮ ಮಾಡುತ್ತಿದ್ದು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿಕೊಂಡರು.

ಮನರಂಜನಾ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಅರ್ಜುನ್ ಜನ್ಯ, ಅನುಶ್ರೀ, ದಿವ್ಯಾ ಮಲ್ನಾಡ್ ಸೇರಿ ಹಲವರು ಆಗಮಿಸುತ್ತಾರೆ. ಮೂರು ದಿನ ನಡೆಯುವ ಉತ್ಸವದಲ್ಲಿ ಸುಮಾರು 5 ಸಾವಿರ ಜನರಿಗೆ ಉಚಿತ ಊಟ ಕೊಡುವ ವ್ಯವಸ್ಥೆ ಮಾಡಲಾಗಿದೆ.‌ ಇದರೊಟ್ಟಿಗೆ ಮನರಂಜನೆಯನ್ನ ಸವಿಯಲಿ ಎನ್ನುವುದು ನಮ್ಮ ‌ಉದ್ದೇಶ ಎಂದರು. ರಾಜ್ಯದ ವಿವಿಧ ಭಾಗದಿಂದ ಸುಮಾರು 5 ಲಕ್ಷ ಜನರು ಬರುವ ನಿರೀಕ್ಷೆ ಇದೆ.‌ ಅದರಲ್ಲೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಮೂರು ದಿನ ಮೀನುಗಾರರ ಹಬ್ಬ ನಡೆಯಲಿದೆ ಎಂದರು.

ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ‌ ಶಿವಕುಮಾರ್ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಮೀನುಗಾರರ ಸಮಸ್ಯೆಗಳ ಬಗ್ಗೆ ಸಿಎಂ, ಡಿಸಿಎಂ ಬಳಿ ತಿಳಿಸಲಾಗುವುದು. ಮೀನುಗಾರರಿಗೆ ಉಪಯೋಗ ಆಗುವ ಹಲವು ವಿಚಾರವನ್ನು ಘೋಷಣೆ ಮಾಡಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!