ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್!
ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್!
ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್!
ಹಳಿಯಾಳ: ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ ತೆರಳಿದ್ದ ವಿದ್ಯಾರ್ಥಿನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಎರಡನೇ ತರಗತಿ ಓದುತ್ತಿರುವ ಸಾನ್ವಿ ಬಸವರಾಜ ಗೌಳಿ(8) ವಿದ್ಯುತ್ ಶಾಕ್‌ಗೆ ಬಲಿಯಾದ ಬಾಲಕಿಯಾಗಿದ್ದಾಳೆ.
ಶಾಲೆಯ ಆವರಣದ ಶೌಚಾಲಯದ ಬಳಿಯೇ ಬೋರ್‌ವೆಲ್ ತೆಗೆಸಲಾಗಿದ್ದು ಇದಕ್ಕೆ ಅನಧಿಕೃತ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು. ಮೇನ್ ಲೈನ್ ನಿಂದ ಪಡೆದಿದ್ದ ತಂತಿ ತುಂಡಾಗಿ ಶೌಚಾಲಯದಲ್ಲಿ ಬಿದ್ದಿದ್ದು, ಬಾಲಕಿ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಶಾಕ್ ತಗುಲಿದೆ.
ಶಾಲೆಯ ಮುಖ್ಯ ಶಿಕ್ಷಕರು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಲ್ಲದೇ ವಿದ್ಯುತ್ ವಯರ್ ತುಂಡಾದರೂ ನಿರ್ಲಕ್ಷ ವಹಿಸಿದ್ದರಿಂದ ಏನೂ ಅರಿಯದ ಮಗುವೊಂದು ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರವೀಣ ಹುಚ್ಚಣ್ಣವರ್, ಸಿಪಿಐ ಜಯವಂತ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬಾಲಕಿ ಮೃತದೇಹವನ್ನು ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ ಸಹ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.