ಕ್ಷುಲ್ಲಕ ಕಾರಣಕ್ಕೆ ಅಣ್ಣನಿಂದಲೇ ತಮ್ಮನ ಕೊಲೆ
ಹೊನ್ನಾವರ: ತಾಲೂಕಿನ ಗುಂಡಿಬೈಲ್ ಹೆಬೈಲ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಒಡಹುಟ್ಟಿದ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮಂಜುನಾಥ ಹನುಮಂತ ನಾಯ್ಕ ಈತ ತನ್ನ ಸಹೋದರನಾದ ನಾಗೇಶ್ ಹನುಮಂತ ನಾಯ್ಕ ಇವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಹೊನ್ನಾವರ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ. ಕೊಲೆಗೆ ಸರಿಯಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.