Uncategorized
ನಿಲ್ಲಿಸಿಟ್ಟ ಕಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲು!
ನಿಲ್ಲಿಸಿಟ್ಟ ಕಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲು!
ನಿಲ್ಲಿಸಿಟ್ಟ ಕಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲು!
ಕಾರವಾರ: ನಿಲ್ಲಿಸಿಟ್ಟ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕಾರವಾರದಲ್ಲಿ ನಡೆದಿದೆ.
ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾಗಿದೆ.
ವಿಲಾಸ್ ಅಣ್ವೇಕರ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಪೊಲೀಸ್ ಕ್ವಾರ್ಟರ್ಸ್ ಕಾಂಪೌಂಡ್ ಬಳಿ ನಿಲ್ಲಿಸಿಟ್ಟಿದ್ದರು. ಈ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.