ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನದಲ್ಲಿ ಬೆಂಕಿ!
ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನದಲ್ಲಿ ಬೆಂಕಿ!
- ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನದಲ್ಲಿ ಬೆಂಕಿ!
ಭಟ್ಕಳ: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನಕ್ಕೆ ಏಕಾಏಕಿ ಬೆಂಕಿ ತಗುಲಿದ ಘಟನೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಬಳಿ ನಡೆದಿದೆ.
ತಾಲ್ಲೂಕಿನ ಹೆಬಳೆಯಲ್ಲಿರುವ ನ್ಯೂಶಮ್ಸ್ ಶಾಲೆಯ ವಾಹನ ಇದಾಗಿದ್ದು, ಸೋಮವಾರ ಮಧ್ಯಾಹ್ನ ಭಟ್ಕಳದಿಂದ ಶಿರಾಲಿಯತ್ತ ಮಕ್ಕಳನ್ನು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ವಾಹನದಲ್ಲಿ ಏಕಾಏಕಿ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಕೂಡಲೇ ವಾಹನವನ್ನು ಹೆದ್ದಾರಿ ಪಕ್ಕ ನಿಲ್ಲಿಸಿ ಮಕ್ಕಳನ್ನು ಕೆಳಗಿಳಿಸಿದ್ದಾನೆ.
ಆದರೆ ನೋಡನೋಡುತ್ತಿದ್ದಂತೆ ವಾಹನದ ಒಳಗೆ ಬೆಂಕಿ ವ್ಯಾಪಿಸಿದ್ದು ಹೊತ್ತಿ ಉರಿಯಲು ಆರಂಭಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೋಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ವಾಹನದಲ್ಲಿ 12 ಮಂದಿ ವಿದ್ಯಾರ್ಥಿಗಳು ಇದ್ದು, ಎಲ್ಲರೂ ಸಹ ಅಪಾಯದಿಂದ ಪಾರಾಗಿದ್ದಾರೆ. ಶಾಲಾ ವಾಹನದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.