
ನೂರಾರು ನಾಟಕ, 480ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿರುವ ಉಮಾಶ್ರೀ ಯಕ್ಷಗಾನ ವೇಷದಲ್ಲೂ ಮಿಂಚಿದರು.
ಹೊನ್ನಾವರದ ಸೆಂಟ್ ಆಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿಯು ಪ್ರದರ್ಶಿಸಿದ ‘ಶ್ರೀ ರಾಮ ಪಟ್ಟಾಭಿಷೇಕ’ ಪ್ರಸಂಗದಲ್ಲಿ ‘ಮಂಥರೆ’ಯ ಪಾತ್ರಕ್ಕೆ ಜೀವ ತುಂಬಿದರು.
68 ನಿಮಿಷಗಳ ಕಾಲ ವೇದಿಕೆಯಲ್ಲೇ ಇದ್ದು ಕೈಕೇಯಿ ಪಾತ್ರಧಾರಿಯಾಗಿದ್ದ ಸುಬ್ರಹ್ಮಣ್ಯ ಯಲಗುಪ್ಪ ಅವರೊಂದಿಗೆ ಯಕ್ಷನೃತ್ಯದೊಂದಿಗೆ ನಿರರ್ಗಳ ಅರ್ಥಗಾರಿಕೆಯ ಮೂಲಕ ಸಭಿಕರ ಸಿಳ್ಳೆ, ಚಪ್ಪಾಳೆ ಗಿಟ್ಟಿಸಿದರು.
ಉಮಾಶ್ರೀ ಯಕ್ಷಗಾನ ವೇದಿಕೆಯಲ್ಲಿ ನೋಡಲೆಂದು ಹೊನ್ನಾವರದ ಹಳ್ಳಿಗಳಿಂದ, ಅಕ್ಕಪಕ್ಕದ ತಾಲ್ಲೂಕುಗಳಿಂದ, ಮಾತ್ರವಲ್ಲದೆ ವಿಟ್ಲ, ಪುತ್ತೂರು ಭಾಗದಿಂದಲೂ ಅಭಿಮಾನಿಗಳು ಸೇರಿದ್ದರು.
ಉಮಾಶ್ರೀ ನಟಿಸಿರುವ ಯಕ್ಷಗಾನದ ವಿಡಿಯೋ ನೋಡಿ