ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಯಲ್ಲಾಪುರ: ತಾಲೂಕಿನ ಕಣ್ಣಿಗೇರಿ ಬಳಿ ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಶಿರಸಿಯಿಂದ ಬೆಳಗಾವಿಗೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ 15ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹುಬ್ಬಳ್ಳಿಯ ಕ್ರಿಮ್ಸ್ ಗೆ ರವಾನಿಸಲಾಗಿದೆ. ಇತರೆ ಗಾಯಾಳುಗಳು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಲ್ಲಾಪುರದಿಂದ ಹಳಿಯಾಳ ಮಾರ್ಗವಾಗಿ ಹೊರಟಿದ್ದ ಬಸ್ ನಲ್ಲಿ ಒಟ್ಟು 40 ಮಂದಿ ಪ್ರಯಾಣಿಸುತ್ತಿದ್ದರು.
ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೂರು ದಿನಗಳ ಹಿಂದೆ ಹೊನ್ನಾವರದಲ್ಲೂ ಕೂಡ ಸರ್ಕಾರಿ ಬಸ್ ಬ್ರೇಕ್ ಫೇಲಾಗಿ ಅಪಘಾತವಾಗಿತ್ತು. ಇದೀಗ ಮತ್ತೊಂದು ಬಸ್ ಅಪಘಾತವಾಗಿದ್ದು ಜನರು ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಲು ಆತಂಕಪಡುವಂತಾಗಿದೆ. ಇಲಾಖೆಯ ಅಧಿಕಾರಿಗಳು ಸರ್ಕಾರಿ ಬಸ್ ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಆಗ್ರಹ ಕೇಳಿ ಬಂದಿದೆ.