Uncategorized
ಇಂದಿನಿಂದ ಕರಾವಳಿ ಸಮುದ್ರ ಉತ್ಸವ: ಸಮುದ್ರಕ್ಕೆ ಪೂಜೆ ಸಲ್ಲಿಕೆ
ಇಂದಿನಿಂದ ಕರಾವಳಿ ಸಮುದ್ರ ಉತ್ಸವ: ಸಮುದ್ರಕ್ಕೆ ಪೂಜೆ ಸಲ್ಲಿಕೆ

ಕಾರವಾರ: ನಗರದ ರವೀಂದ್ರನಾಥ ಠಾಗೋರ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಅವರ ನೇತೃತ್ವದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಸಮುದ್ರ ಉತ್ಸವ ನಡೆಯಲಿದೆ.
ಕಾರ್ಯಕ್ರಮದ ನಿಮಿತ್ತ ನಗರದಲ್ಲಿನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು. ಬಳಿಕ ಅರಬ್ಬಿ ಸಮುದ್ರಕ್ಕೆ ತೆರಳಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದರು. ಇಂದಿನಿಂದ ಐದು ದಿನಗಳ ಕಾಲ ನಡೆಯಲಿರುವ ಕರಾವಳಿ ಸಮುದ್ರ ಉತ್ಸವ ಕಾರ್ಯಕ್ರಮ ಯಶಸ್ವಿವಾಗಿ ನಡೆಯಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಮೀನುಗಾರ ಸಮಾಜದ ಬಾಂಧವರು ಇದ್ದರು.