ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ
ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ

ಯಲ್ಲಾಪುರ: ಯಲ್ಲಾಪುರದಿಂದ ಅಂಕೋಲಾ ಕಡೆ ಚಲಿಸುತ್ತಿದ್ದ ಲಾರಿ ಅರಬೈಲ್ ಘಟ್ಟ ಮುಕ್ತಾಯದ ನಂತರ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ತಾಯಿ-ಮಗು ಸ್ಥಳದಲ್ಲಿಯೇ ಸಾವನಪ್ಪಿದ ಧಾರುಣ ಘಟನೆ ಬುಧವಾರ(ಫೆ.19) ನಸುಕಿನಲ್ಲಿ ನಡೆದಿದೆ. ಕಾರಿನಲ್ಲಿದ್ದ ಇನ್ನೂ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಪ್ಪಳದ ಶ್ರೀಕಾಂತ ರೆಡ್ಡಿ ಅವರು ತಮ್ಮ ಕುಟುಂಬದೊಂದಿಗೆ ಅಂಕೋಲಾದಿoದ ಹುಬ್ಬಳ್ಳಿ ಕಡೆ ಹೊರಟ್ಟಿದ್ದರು. ಈ ವೇಳೆ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಬಿಜಾಪುರದ ಪ್ರಶಾಂತ ಕುಂಬಾರ ಎಂಬಾತ ಅತೀ ವೇಗದಿಂದ ಲಾರಿ ಚಲಾಯಿಸಿಕೊಂಡು ಬಂದಿದ್ದು, ವೇಗವಾಗಿ ಬಂದ ಲಾರಿ ಅರಬೈಲ್ ಮಾರುತಿ ದೇವಸ್ಥಾನದಿಂದ ಸ್ವಲ್ಪ ಮುಂದೆ ನಿಯಂತ್ರಣ ತಪ್ಪಿ ಬಲಕ್ಕೆ ಹೊರಳಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ರಭಸವಾಗಿ ಲಾರಿ ಡಿಕ್ಕಿಯಾಗಿದೆ.
ಪರಿಣಾಮ ಕಾರಿನಲ್ಲಿದ್ದ ಶ್ರೀಕಾಂತ ರೆಡ್ಡಿ ಅವರ ಪತ್ನಿ ಚೈತ್ರಾ ಆರ್(31) ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಡಿಕ್ಕಿ ರಭಸಕ್ಕೆ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಕಾರು ಚಾಲಕ ರಾಘವೇಂದ್ರ ರೆಡ್ಡಿ, ಜೊತೆಗಿದ್ದ ಆರ್ ವೆಂಕಟೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಯಲ್ಲಾಲಿಂಗ ಕುನ್ನೂರು ತನಿಖೆ ನಡೆಸುತ್ತಿದ್ದಾರೆ. ಸಿಪಿಐ ರಮೇಶ ಹಾನಾಪುರ ಹಾಗೂ ಶಿರಸಿ ಡಿವೈಎಸ್‌ಪಿ ಗಣೇಶ ಕೆ ಎಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.