Social

ಸಮುದ್ರದಲ್ಲಿ ಎತ್ತರದ ಅಲೆಗಳ ಏಳುವ ಸಾಧ್ಯತೆ ಎಚ್ಚರವಹಿಸಿ

ಸಮುದ್ರದಲ್ಲಿ ಎತ್ತರದ ಅಲೆಗಳ ಏಳುವ ಸಾಧ್ಯತೆ ಎಚ್ಚರವಹಿಸ

 

ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ ಉತ್ತರ ಕನ್ನಡ, ಕರಾವಳಿ ತೀರದ ಮಾಜಾಳಿಯಿಂದ ಭಟ್ಕಳವರೆಗೆ ಸಮುದ್ರದಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಜೂನ್ 19ರ ಬೆಳಗ್ಗೆ 8:30ರ ವರೆಗೆ ಸಮುದ್ರದಲ್ಲಿ 3.7 ರಿಂದ 4.2 ಮೀಟರ್ ವ್ಯಾಪ್ತಿಯ ಎತ್ತರದ ಅಲೆಗಳು ಏಳಬಹುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ತಿಳಿಸಿದ್ದಾರೆ.

ಆದ್ದರಿಂದ ಈ ಅವಧಿಯಲ್ಲಿ ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ, (ಮುಂಗಾರಿನಲ್ಲಿ ಮೀನುಗಾರಿಕೆಯನ್ನು ನಿರ್ಬಂಧಿಸಲಾಗಿರುತ್ತದೆ.) ಹಾಗೂ ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಮತ್ತು ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು.

ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!