
ಕಾರವಾರ: ಕಾಳಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಯುವನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಗಗನ ಗಜೀನಕರ್(21) ಮೃತಪಟ್ಟ ಯುವಕನಾಗಿದ್ದಾನೆ. ಈತ ನಿನ್ನೆ ಮಧ್ಯಾಹ್ನ ಸದಾಶಿವಗಡ ಕಣಸಗೇರಿ, ಕೊಂಕಣವಾಡದ ಬಳಿ ಕಾಳಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ನದಿಗೆ ಬಿದ್ದ ಯುವಕನಿಗೆ ಮೇಲೆ ಬರಲಾಗದೆ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಗಗನ ಕಣಸಗೇರಿ ಭಂಡಾರಿವಾಡ ನಿವಾಸಿಯಾಗಿದ್ದ. ಸೀಬರ್ಡ್ ನಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡುತ್ತಿದ್ದ. ಗಗನ ಗಜೀನಕರ್ ನದಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಬಗ್ಗೆ ಅವರ ತಂದೆ ಗುರುನಾಥ ಗಜಿನಕರ್ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.