Uncategorized
ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಇ-ಮೇಲ್ ಮೂಲಕ ಜೀವ ಬೆದರಿಕೆ
ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಇ-ಮೇಲ್ ಮೂಲಕ ಜೀವ ಬೆದರಿಕೆ

ಕಾರವಾರ: ಶಿರಸಿ ನಗರದ ಕೆ.ಎಚ್.ಬಿ. ಕಾಲೋನಿಯಲ್ಲಿ ವಾಸವಿರುವ ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಇಮೇಲ್ ಮುಖಾಂತರ ಜೀವ ಬೆದರಿಕೆ ಬಂದಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದ ಜೂನ್ 24 ರಂದು ಈ ಇಮೇಲ್ ಕಳುಹಿಸಲಾಯಿತು ಎಂದು ತಿಳಿದುಬಂದಿದೆ.
ಈ ಸಂಬಂಧ ಅನಂತಕುಮಾರ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಅವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ಅನುಮತಿಯ ಮೇರೆಗೆ ಶುಕ್ರವಾರ ಅಧಿಕೃತವಾಗಿ ದೂರು ದಾಖಲಾಗಿದೆ.
ಈ ಮೊದಲು ಕೂಡ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ ಬಂದಿದ್ದ ಬಗ್ಗೆ ದೂರುಗಳು ಸಲ್ಲಿಕೆಯಾಗಿದ್ದವು. ಈ ಘಟನೆ ಕುರಿತು ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಅಪರಿಚಿತನಿಂದ ಬಂದ ಇಮೇಲ್ ಹಾಗೂ ಅದರಲ್ಲಿ ಉಲ್ಲೇಖಿತ ಧಮಕಿಗಳ ಬಗ್ಗೆ ಪೊಲೀಸರು ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.