Uncategorized
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರು
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರು

ಕುಮಟಾ: ತಾಲೂಕಿನ ಖಂಡಗಾರ ಕ್ರಾಸ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಘಟನೆಯ ಸಂದರ್ಭದಲ್ಲಿ ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಮಟಾ ಪೋಲೀಸರು ಸ್ಥಳಕ್ಕೆ ಧಾವಿಸಿದ್ದು, ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.