Crime
ದೋಣಿ ಮಗುಚಿ ನಾಲ್ವರು ಮೀನುಗಾರರು ಕಣ್ಮರೆ: ಇಬ್ಬರ ರಕ್ಷಣೆ
ದೋಣಿ ಮಗುಚಿ ನಾಲ್ವರು ಮೀನುಗಾರರು ಕಣ್ಮರೆ: ಇಬ್ಬರ ರಕ್ಷಣೆ

ಭಟ್ಕಳ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಅಬ್ಬರಕ್ಕೆ ಮಗುಚಿದ ಪರಿಣಾಮ ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ತಾಲ್ಲೂಕಿನ ಅಳ್ವೇಕೋಡಿ ವ್ಯಾಪ್ತಿಯ ಅರಬ್ಬೀ ಸಮುದ್ರದಲ್ಲಿ ನಡೆದಿದೆ.
ಜಾಲಿ ಮೂಲದ ಮನೋಹರ ಎಂಬುವವರ ನಾಡದೋಣಿ ಇದಾಗಿದ್ದು ಒಟ್ಟು ಆರು ಜನ ಮೀನುಗಾರರು ಬುಧವಾರ ಮಧ್ಯಾಹ್ನ ಸಾಂಪ್ರದಾಯಿಕ ಮೀನುಗಾರಿಕೆಗೆಂದು ತೆರಳಿದ್ದರು. ಈ ವೇಳೆ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಪಲ್ಟಿಯಾಗಿದ್ದು ದೋಣಿಯಲ್ಲಿದ್ದವರು ನೀರು ಪಾಲಾಗಿದ್ದಾರೆ.
ಘಟನೆ ಕುರಿತು ತಿಳಿದ ಸ್ಥಳೀಯ ಮೀನುಗಾರರು ಸ್ಥಳಕ್ಕೆ ಧಾವಿಸಿ ನೀರು ಪಾಲಾದವರ ರಕ್ಷಿಸಲು ಕಾರ್ಯಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ. ಇನ್ನೂ ನಾಲ್ವರು ನಾಪತ್ತೆಯಾಗಿದ್ದು ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಪಲ್ಟಿಯಾದ ದೋಣಿ ಅಲೆಗಳೊಂದಿಗೆ ಅಳ್ವೇಕೋಡಿ ಬ್ರೇಕ್ ವಾಟರ್ ಬಳಿ ಪತ್ತೆಯಾಗಿದೆ.