Crime

ಬಸ್ ನಿಲ್ದಾಣದಲ್ಲಿ ಹಾಡಹಗಲೇ ಬೈಕ್ ಕಳ್ಳತನ

ಬಸ್ ನಿಲ್ದಾಣದಲ್ಲಿ ಹಾಡಹಗಲೇ ಬೈಕ್ ಕಳ್ಳತನ

 

ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿಟ್ಟ ದ್ವಿಚಕ್ರ ವಾಹನವನ್ನು‌ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿರುವ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ.

ಮಂಕಿಯ ವಿನಾಯಕ ನಾಯ್ಕ ಇವರು ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಜೂನ್ 11 ರಂದು ಬೈಕ್ ನಿಲ್ಲಿಸಿದ್ದರು. ಮಧ್ಯಾಹ್ನ 11:57ರ ಸಮಯದಲ್ಲಿ ಯುವಕನೊರ್ವ ಬೈಕ್ ಕಳ್ಳತನ ಮಾಡಿಕೊಂಡು ಹೊಗುತ್ತಿರುವ ದೃಶ್ಯ ಬಸ್ ನಿಲ್ದಾಣದ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ.

ಬೈಕ್ ಕಳ್ಳತನವಾಗಿದೆ ಎಂದು ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಕ್ಯಾಮರ ದೃಶ್ಯಾವಳಿ ಆಧರಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!