ಕಾರವಾರ: ತಾಲೂಕಿನ ಸದಾಶಿವಗಡ ಸಮೀಪದ ದೇವವಾಡ ಬಳಿ ಅಪರಿಚಿತ ಯುವಕನ ಶವ ಪತ್ತೆಯಾಗಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯ ದೇವಾವಾಡ ಪ್ರದೇಶದಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮಾಹಿತಿ ತಿಳಿದ ತಕ್ಷಣ ಚಿತ್ತಾಕುಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ
ಮೃತ ಯುವಕನ ಗುರುತು ಹಾಗೂ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕೊಲೆ ಮಾಡಿ ಮೃತದೇಹದ ಕೊರಳಿಗೆ ಹಗ್ಗ ಕಟ್ಟಿ ಇಟ್ಟಿರುವಂತೆ ಮೇಲ್ನೊಟಕ್ಕೆ ಕಂಡುಬರುತ್ತದೆ. ಮೊಣಕಾಲು ಭೂಮಿಗೆ ತಾಗಿದೆ. ಹೀಗಾಗಿ ಇದು ಆತ್ಮಹತ್ಯೆಯಾಗಿರದೇ ಕೊಲೆಯ ಶಂಕೆ ವ್ಯಕ್ತವಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

